ಜುಲೈ 30ರಂದು ವಿಜಯಪುರದಲ್ಲಿ ನಡೆಯಬೇಕಿದ್ದ NEET ಪೇಪರ್ ಸೋರಿಕೆ ವಿರುದ್ಧ ಪ್ರತಿಭಟನಾ ರ್ಯಾಲಿ ತಾತ್ಕಾಲಿಕವಾಗಿ ಮುಂದೂಡಿಕೆ
ಸರ್ಕಾರ ಒಪ್ಪಿಕೊಂಡಿರುವ ಎಲ್ಲಾ ಬೇಡಿಕೆಗಳನ್ನು ನಿಗದಿತ ಅವಧಿಯಲ್ಲಿ ಸಮರ್ಪಕವಾಗಿ ಈಡೇರಿಸಲು ವಿಫಲವಾದಲ್ಲಿ, ಪ್ರಗತಿಪರ ಸಂಘಟನೆಗಳ ವೇದಿಕೆಯು ಮತ್ತೊಮ್ಮೆ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಪ್ರಕಟಿಸಲಿದೆ.
ನ
ನಮಸ್ತೆ ಕರ್ನಾಟಕ ಡೆಸ್ಕ್
28/7/2026 · 30 views

ಜುಲೈ 30ರಂದು ವಿಜಯಪುರದಲ್ಲಿ ನಡೆಯಬೇಕಿದ್ದ NEET ಪೇಪರ್ ಸೋರಿಕೆ ವಿರುದ್ಧ ಪ್ರತಿಭಟನಾ ರ್ಯಾಲಿ ತಾತ್ಕಾಲಿಕವಾಗಿ ಮುಂದೂಡಿಕೆ
ಪ್ರಗತಿಪರ ಸಂಘಟನೆಗಳ ವೇದಿಕೆಯ ವತಿಯಿಂದ ಜುಲೈ 27ರಂದು ಸೋಮವಾರ ಸಂಜೆ ನಡೆದ ಸಭೆಯಲ್ಲಿ NEET ಪೇಪರ್ ಸೋರಿಕೆ ಸೇರಿದಂತೆ ಶಿಕ್ಷಣ ಕ್ಷೇತ್ರದ ವಿವಿಧ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಭಾಗವಹಿಸಿದ್ದ ಎಲ್ಲಾ ಪ್ರಗತಿಪರ ಸಂಘಟನೆಗಳ ಪ್ರತಿನಿಧಿಗಳು ಮತ್ತು ಸದಸ್ಯರ ಒಮ್ಮತದ ಅಭಿಪ್ರಾಯದ ಮೇರೆಗೆ, 2026ರ ಜುಲೈ 30ರಂದು ಆಯೋಜಿಸಲಾಗಿದ್ದ NEET ಪೇಪರ್ ಸೋರಿಕೆ ಹಾಗೂ ಇತರ ಸಂಬಂಧಿತ ವಿಷಯಗಳ ವಿರುದ್ಧದ ಪ್ರತಿಭಟನಾ ರ್ಯಾಲಿಯನ್ನು ತಾತ್ಕಾಲಿಕವಾಗಿ ಹಿಂಪಡೆಯಲು ನಿರ್ಧರಿಸಲಾಗಿದೆ.
ಈ ನಿರ್ಧಾರವು ಸರ್ಕಾರವು ಕೇಂದ್ರ ಶಿಕ್ಷಣ ಮಂತ್ರಿ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ತೆಗೆದುಕೊಂಡಿದ್ದು ಹಾಗೂ ಇನ್ನೂ ವಿವಿಧ ಬೇಡಿಕೆಗಳ ಕುರಿತು ನೀಡಿರುವ ಭರವಸೆ ಹಾಗೂ ಮುಂದಿನ ಬೆಳವಣಿಗೆಗಳನ್ನು ಗಮನದಲ್ಲಿಟ್ಟುಕೊಂಡು ಕೈಗೊಳ್ಳಲಾಗಿದೆ.
ಆದಾಗ್ಯೂ, ಸರ್ಕಾರ ಒಪ್ಪಿಕೊಂಡಿರುವ ಎಲ್ಲಾ ಬೇಡಿಕೆಗಳನ್ನು ನಿಗದಿತ ಅವಧಿಯಲ್ಲಿ ಸಮರ್ಪಕವಾಗಿ ಈಡೇರಿಸಲು ವಿಫಲವಾದಲ್ಲಿ, ಪ್ರಗತಿಪರ ಸಂಘಟನೆಗಳ ವೇದಿಕೆಯು ಮತ್ತೊಮ್ಮೆ ಸಭೆ ನಡೆಸಿ ಮುಂದಿನ ಹೋರಾಟದ ರೂಪುರೇಷೆಗಳನ್ನು ಪ್ರಕಟಿಸಲಿದೆ.
ಶಿಕ್ಷಣ ವ್ಯವಸ್ಥೆಯಲ್ಲಿ ಪಾರದರ್ಶಕತೆ, ವಿದ್ಯಾರ್ಥಿಗಳಿಗೆ ನ್ಯಾಯ ಹಾಗೂ ಉತ್ತರದಾಯಿತ್ವವನ್ನು ಖಚಿತಪಡಿಸುವ ನಿಟ್ಟಿನಲ್ಲಿ ನಮ್ಮ ಹೋರಾಟ ಮುಂದುವರಿಯಲಿದೆ.
Ad

ಕಾಮೆಂಟ್‌ಗಳು (0)
ಕಾಮೆಂಟ್ ಮಾಡಲು ಲಾಗಿನ್ ಮಾಡಿ.
ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ!

