ಜಂತರ್ ಮಂತರ್‌ನಲ್ಲಿ ಹೋರಾಟಗಾರರ ಮೇಲಿನ ದಬ್ಬಾಳಿಕೆ ಖಂಡಿಸಿ ನಾಳೆ ವಿಜಯಪುರದಲ್ಲಿ ಪತ್ರಿಕಾಗೋಷ್ಠಿ
ನವದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ ಒಂದೂವರೆ ತಿಂಗಳಿಂದ ವಿವಿಧ ಶೈಕ್ಷಣಿಕ ಮತ್ತು ವಿದ್ಯಾರ್ಥಿ ಸಂಬಂಧಿತ ಬೇಡಿಕೆಗಳ ಕುರಿತು ನಡೆಯುತ್ತಿರುವ ಹೋರಾಟದ ವೇಳೆ ಪ್ರತಿಭಟನಾಕಾರರ ಮೇಲೆ ನಡೆದಿರುವ ಲಾಠಿಚಾರ್ಜ್, ದಬ್ಬಾಳಿಕೆ ಹಾಗೂ ಹಲ್ಲೆಗಳನ್ನು ಖಂಡಿಸಿ, ಪ್ರಗತಿಪರ ಸಂಘಟನೆಗಳ ಒಕ್ಕೂಟ, ವಿಜಯಪುರ ವತಿಯಿಂದ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿದೆ. ಈ ಪತ್ರಿಕಾಗೋಷ್ಠಿಯು ನಾಳೆ ಬೆಳಿಗ್ಗೆ 10.00 ಗಂಟೆಗೆ ವಿಜಯಪುರದ ಅಂಬೇಡ್ಕರ್ ಸರ್ಕಲ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮಾಧ್ಯಮ ಪ್ರತಿನಿಧಿಗಳು ಭಾಗವಹಿಸುವಂತೆ ಆಹ್ವಾನಿಸಲಾಗಿದೆ.
ನ
ನಮಸ್ತೆ ಕರ್ನಾಟಕ ಡೆಸ್ಕ್
2 ಗಂಟೆಗಳ ಹಿಂದೆ · 11 views

ನವದೆಹಲಿ ಜಂತರ್ ಮಂತರ್‌ನಲ್ಲಿ ಕಳೆದ ಒಂದೂವರೆ ತಿಂಗಳಿಂದ ವಿದ್ಯಾರ್ಥಿ-ಯುವಜನರ ಹೋರಾಟಗಾರರು ತಮ್ಮ ವಿವಿಧ ಶೈಕ್ಷಣಿಕ ಮತ್ತು ಪ್ರಜಾಸತ್ತಾತ್ಮಕ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಂತಿಯುತವಾಗಿ ನಡೆಸುತ್ತಿರುವ ಪ್ರತಿಭಟನೆಯ ಸಂದರ್ಭದಲ್ಲಿ ಅವರ ಮೇಲೆ ನಿರಂತರವಾಗಿ ನಡೆಯುತ್ತಿರುವ ದಬ್ಬಾಳಿಕೆ, ಲಾಠಿಚಾರ್ಜ್ ಹಾಗೂ ಹಲ್ಲೆಗಳನ್ನು ತೀವ್ರವಾಗಿ ಖಂಡಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ, ವಿಜಯಪುರ ಮಹತ್ವದ ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿದೆ.
ಈ ಪತ್ರಿಕಾಗೋಷ್ಠಿಯಲ್ಲಿ ದೇಶದಾದ್ಯಂತ ಶೈಕ್ಷಣಿಕ ಕ್ಷೇತ್ರದಲ್ಲಿ ಕಂಡುಬರುತ್ತಿರುವ ಬೆಳವಣಿಗೆಗಳು, ವಿದ್ಯಾರ್ಥಿ ಹಕ್ಕುಗಳ ರಕ್ಷಣೆ, ಪ್ರತಿಭಟನಾಕಾರರ ಮೇಲಿನ ಕ್ರಮಗಳು ಹಾಗೂ ಜಿಲ್ಲೆಯ ಮಟ್ಟದಲ್ಲಿ ಮುಂದಿನ ಹೋರಾಟದ ರೂಪುರೇಷೆಗಳ ಕುರಿತು ಸಂಘಟನೆ ತನ್ನ ನಿಲುವನ್ನು ಸ್ಪಷ್ಟಪಡಿಸಲಿದೆ.
ಪತ್ರಿಕಾಗೋಷ್ಠಿಯು ನಾಳೆ ಬೆಳಿಗ್ಗೆ 10.00 ಗಂಟೆಗೆ ವಿಜಯಪುರ ನಗರದ ಅಂಬೇಡ್ಕರ್ ಸರ್ಕಲ್‌ನಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಪತ್ರಿಕಾ, ದೃಶ್ಯ ಹಾಗೂ ಡಿಜಿಟಲ್ ಮಾಧ್ಯಮದ ಪ್ರತಿನಿಧಿಗಳು ಆಗಮಿಸಿ ಕಾರ್ಯಕ್ರಮವನ್ನು ವರದಿ ಮಾಡುವಂತೆ ಸಂಘಟನೆಯ ಮುಖಂಡರು ಮನವಿ ಮಾಡಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಯುವ ನಾಯಕ ಅಕ್ಷಯ ಅಜಮನಿ ಅವರು, ಪ್ರಜಾಸತ್ತಾತ್ಮಕ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ವಿದ್ಯಾರ್ಥಿ ಮತ್ತು ಯುವಜನರ ಮೇಲಿನ ದೌರ್ಜನ್ಯವನ್ನು ಸಮಾಜ ಗಂಭೀರವಾಗಿ ಪರಿಗಣಿಸಬೇಕಿದ್ದು, ಈ ವಿಷಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪತ್ರಿಕಾಗೋಷ್ಠಿ ಆಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಮೆಂಟ್‌ಗಳು (0)
ಕಾಮೆಂಟ್ ಮಾಡಲು ಲಾಗಿನ್ ಮಾಡಿ.
ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ!