Ad
GREEN VALLEY INTERNATIONAL SCHOOL
ರಾಜ್ಯ

ಕುರುಬ ಸಮುದಾಯ ಎಸ್‌ಟಿ ಸೇರ್ಪಡೆಗೆ ಆಗ್ರಹ: ಆಗಸ್ಟ್ 8 ರಂದು ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಕ್ಕೆ ಯುವ ನಾಯಕ ವೀರೇಶ ಬಿಸನಾಳ ಕರೆ

ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಯುವ ನಾಯಕ ವೀರೇಶ ಬಿಸನಾಳ ಅವರು ಸಮುದಾಯದ ಬಹುಕಾಲದ ಬೇಡಿಕೆಯನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಇದೇ ವಿಚಾರವಾಗಿ ಆಗಸ್ಟ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹಕ್ಕೊತ್ತಾಯ ಹೋರಾಟ ನಡೆಸಲಾಗುವುದು ಎಂದು ಘೋಷಿಸಿ, ಸಮುದಾಯದ ಯುವಕರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ.

ನಮಸ್ತೆ ಕರ್ನಾಟಕ ಡೆಸ್ಕ್
25/7/2026 · 63 views
ಕುರುಬ ಸಮುದಾಯ ಎಸ್‌ಟಿ ಸೇರ್ಪಡೆಗೆ ಆಗ್ರಹ: ಆಗಸ್ಟ್ 8ರಂದು ಫ್ರೀಡಂ ಪಾರ್ಕ್‌ನಲ್ಲಿ ಹೋರಾಟಕ್ಕೆ ಯುವ ನಾಯಕ ವೀರೇಶ ಬಿಸನಾಳ ಕರೆ ಮುದ್ದೇಬಿಹಾಳ 25 ಜುಲೈ: ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಯುವ ನಾಯಕ ವೀರೇಶ ಬಿಸನಾಳ ಅವರು ಸಮುದಾಯದ ಬಹುಕಾಲದ ಬೇಡಿಕೆಯನ್ನು ತಕ್ಷಣ ಈಡೇರಿಸುವಂತೆ ಆಗ್ರಹಿಸಿದ್ದಾರೆ. ಇದೇ ವಿಚಾರವಾಗಿ ಆಗಸ್ಟ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹಕ್ಕೊತ್ತಾಯ ಹೋರಾಟ ನಡೆಸಲಾಗುವುದು ಎಂದು ಘೋಷಿಸಿ, ಸಮುದಾಯದ ಯುವಕರು, ಮುಖಂಡರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದ್ದಾರೆ. ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂಬ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ತಕ್ಷಣ ಈಡೇರಿಸಬೇಕು ಎಂದು ಯುವ ನಾಯಕ ವೀರೇಶ ಬಿಸನಾಳ ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಕುರುಬ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಯಾವುದೇ ವಿಳಂಬವಿಲ್ಲದೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಮುದಾಯದ ಹಕ್ಕುಗಳನ್ನು ಸಂವಿಧಾನಬದ್ಧವಾಗಿ ಪಡೆಯಲು ಸಂಘಟಿತ ಹೋರಾಟ ಅಗತ್ಯವಾಗಿದ್ದು, ಎಲ್ಲ ಯುವಕರು, ಮುಖಂಡರು ಹಾಗೂ ಸಮುದಾಯದ ಸದಸ್ಯರು ಒಂದಾಗಿ ಹಕ್ಕೊತ್ತಾಯ ಅಭಿಯಾನದಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು. ಈ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ಪರಿಣಾಮಕಾರಿಯಾಗಿ ತಲುಪಿಸಲು ಆಗಸ್ಟ್ 8ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಹಕ್ಕೊತ್ತಾಯ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು. ಈ ಹೋರಾಟದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮುದಾಯದ ಒಗ್ಗಟ್ಟನ್ನು ಪ್ರದರ್ಶಿಸುವಂತೆ ಮನವಿ ಮಾಡಿದರು. ಕುರುಬ ಸಮುದಾಯದ ಎಸ್‌ಟಿ ಸೇರ್ಪಡೆ ಕುರಿತ ಬೇಡಿಕೆ ಹಲವು ವರ್ಷಗಳಿಂದ ಮುಂದುವರಿದಿದ್ದು, ಸರ್ಕಾರ ಈ ಕುರಿತು ಸೂಕ್ತ ಹಾಗೂ ಶೀಘ್ರ ನಿರ್ಧಾರ ಕೈಗೊಳ್ಳಬೇಕೆಂದು ಹೋರಾಟಗಾರರು ಒತ್ತಾಯಿಸಿದ್ದಾರೆ.
Ad
ಸಂಪಾದಕರು

ಕಾಮೆಂಟ್‌ಗಳು (0)

ಕಾಮೆಂಟ್ ಮಾಡಲು ಲಾಗಿನ್ ಮಾಡಿ.

ಇನ್ನೂ ಯಾವುದೇ ಕಾಮೆಂಟ್‌ಗಳಿಲ್ಲ. ಮೊದಲಿಗರಾಗಿ!